PRABHAVAA.COM

ಮಾಜಿ ಸಚಿವ ರಮಾನಾಥ್ ರೈ ಕಾರಿಗೆ ಖಾಸಗಿ ಬಸ್ ಢಿಕ್ಕಿ: ಪ್ರಾಣಪಾಯದಿಂದ ಪಾರು, ಆಸ್ಪತ್ರೆಗೆ ದಾಖಲು

Dakshina Kannada:

Font size:

ಮಾಜಿ ಸಚಿವ ರಮಾನಾಥ್ ರೈ ಕಾರಿಗೆ ಖಾಸಗಿ ಬಸ್ ಢಿಕ್ಕಿ: ಪ್ರಾಣಪಾಯದಿಂದ ಪಾರು, ಆಸ್ಪತ್ರೆಗೆ ದಾಖಲು

ಮಾಜಿ ಸಚಿವ ರಮಾನಾಥ್ ರೈ ಕಾರಿಗೆ ಖಾಸಗಿ ಬಸ್ ಢಿಕ್ಕಿ: ಪ್ರಾಣಪಾಯದಿಂದ ಪಾರು, ಆಸ್ಪತ್ರೆಗೆ ದಾಖಲು

From Jayaram Udupi
ಉಡುಪಿ/​ಕಾರ್ಕಳ:
ಮಾಜಿ ಸಚಿವ ಬಿ. ರಮಾನಾಥ್ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ರಮಾನಾಥ್ ರೈ ಅವರು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169ರ ಚಿಲಿಂಬಿ ಸಮೀಪ ಈ ಘಟನೆ ನಡೆದಿದೆ.
​
ಮಾಜಿ ಸಚಿವ ರಮಾನಾಥ್ ರೈ ಅವರು ಮೂಡುಬಿದಿರೆಯಿಂದ ಕಾರ್ಕಳದತ್ತ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಢಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿದ್ದು, ರಮಾನಾಥ್ ರೈ ಅವರ ಕೈ ಹಾಗೂ ಕಾಲಿಗೆ ಗಾಯಗಳಾಗಿವೆ.
​
ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳಕ್ಕಾಗಮಿಸಿದ ಮೂಡುಬಿದಿರೆ ಹಿಂದೂ ಜಾಗರಣ ವೇದಿಕೆಯ ಪ್ರಮುಖರಾದ ಜಗದೀಶ್, ಶಿಶಿರ್ ಹಾಗೂ ಸ್ಥಳೀಯರು ಹರಸಾಹಸ ಪಟ್ಟು ಕಾರಿನೊಳಗೆ ಸಿಲುಕಿಕೊಂಡಿದ್ದ ಮಾಜಿ ಸಚಿವ ರಮಾನಾಥ್ ರೈ ಮತ್ತು ಅವರ ಚಾಲಕನನ್ನು ಹೊರತೆಗೆದರು. ಬಳಿಕ ಗಾಯಾಳುಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಯಿತು.
​ಸದ್ಯ ರಮಾನಾಥ್ ರೈ ಹಾಗೂ ಚಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Comments

Leave a Comment

Prev Post ಜಾಗತಿಕ ಕ್ವಾಂಟಂ ವೇದಿಕೆಯಾಗಿ 2027ರ "ಬೆಂಗಳೂರು ಕ್ವಾಂಟಂ ಸಮಿಟ್‌"ನ್ನು ವಿಸ್ತರಿಸಲು ಕರ್ನಾಟಕ ಸಜ್ಜು: ಸಚಿವ ಡಾ. ಅಜಯ್ ಧರ್ಮಸಿಂಗ್
Next Post ಗೂಳ್ಯಗೂಳ್ಯನಂದಿಗುಂದ ಸರ್ಕಾರಿ ಗೋಮಾಳ ಜಮೀನು ವಿವಾದ – ನಕಲಿ ದಾಖಲೆ ಆರೋಪ, ಪ್ರತಿಭಟನಾಕಾರರ ಮೇಲೆ ಸುಳ್ಳು ಪ್ರಕರಣ ಖಂಡನೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News