PRABHAVAA.COM

ಧರ್ಮ, ಸಂಸ್ಕೃತಿ ಉಳಿಸುವಲ್ಲಿ ಮಠಗಳ ಕೊಡುಗೆ ಅಪಾರ: ಸಚಿವ ವಿಜಯಾನಂದ ಕಾಶಪ್ಪನವರ

:

Font size:

ಧರ್ಮ, ಸಂಸ್ಕೃತಿ ಉಳಿಸುವಲ್ಲಿ ಮಠಗಳ ಕೊಡುಗೆ ಅಪಾರ: ಸಚಿವ ವಿಜಯಾನಂದ ಕಾಶಪ್ಪನವರ

ಧರ್ಮ, ಸಂಸ್ಕೃತಿ ಉಳಿಸುವಲ್ಲಿ ಮಠಗಳ ಕೊಡುಗೆ ಅಪಾರ: ಸಚಿವ ವಿಜಯಾನಂದ ಕಾಶಪ್ಪನವರ

ಜಮಖಂಡಿ- ಧರ್ಮ ಮತ್ತು ಸಂಸ್ಕೃತಿಯ ಸಂರಕ್ಷಣೆಯಲ್ಲಿ ಮಠಗಳು ಹಾಗೂ ಪೂಜ್ಯರ ಕೊಡುಗೆ ಅಪಾರವಾಗಿದೆ. ಸಮಾಜದಲ್ಲಿ ಧಾರ್ಮಿಕ ಮೌಲ್ಯಗಳನ್ನು ಬೆಳೆಸುವ ಮೂಲಕ ಜನರಲ್ಲಿ ಭಕ್ತಿ, ಶಾಂತಿ ಮತ್ತು ಸೌಹಾರ್ದತೆಯನ್ನು ಮೂಡಿಸುವ ಕಾರ್ಯವನ್ನು ಮಠಗಳು ನಿರಂತರವಾಗಿ ಮಾಡುತ್ತಿವೆ ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ವಿಜಯಾನಂದ ಕಾಶಪ್ಪನವರ ಹೇಳಿದರು

ನಗರದ ಕಡಪಟ್ಟಿ ದೊಡ್ಡ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ 11 ದಿನಗಳ ಕಾಲ ನಡೆಯುತ್ತಿರುವ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ವೀರಸಿಂಹಾಸನದೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗತ್ಪಾದರ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳ ಆಶೀರ್ವಾದ ನಾಡಿನ ಜನರ ಮೇಲೆ ಸದಾ ಇರಲಿ ಎಂದು ಹಾರೈಸಿದ ಸಚಿವರು, ಮಠಗಳು ಧಾರ್ಮಿಕ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗದೆ ಸಮಾಜದಲ್ಲಿ ನೈತಿಕ ಮೌಲ್ಯಗಳು, ಶಾಂತಿ ಮತ್ತು ಪರಸ್ಪರ ಸೌಹಾರ್ದತೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ತಿಳಿಸಿದರು.

ಮಹಾನವಮಿ ಹಾಗೂ ಮೈಸೂರು ದಸರಾ ಆಚರಣೆಗಳ ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಪ್ರಸ್ತಾಪಿಸಿದ ಅವರು, ಇಂತಹ ಉತ್ಸವಗಳು ನಮ್ಮ ನಾಡಿನ ಶ್ರೀಮಂತ ಪರಂಪರೆ, ಸಂಪ್ರದಾಯ ಮತ್ತು ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸುತ್ತವೆ. ಧಾರ್ಮಿಕ ಆಚರಣೆಗಳು ಮತ್ತು ಸಮ್ಮೇಳನಗಳ ಮೂಲಕ ಯುವ ಪೀಳಿಗೆಗೆ ನಮ್ಮ ಸಂಸ್ಕೃತಿ ಹಾಗೂ ಪರಂಪರೆಯ ಪರಿಚಯ ಮಾಡಿಕೊಡುವುದು ಅತ್ಯಂತ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಾಡಿನ ಧಾರ್ಮಿಕ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಜಗದ್ಗುರುಗಳು ಹಾಗೂ ಮಠಗಳು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯವಾಗಿದೆ ಎಂದ ಅವರು, ಇಂತಹ ಧರ್ಮ ಸಮ್ಮೇಳನಗಳು ಸಮಾಜದಲ್ಲಿ ಭಕ್ತಿ, ಏಕತೆ ಮತ್ತು ಸೌಹಾರ್ದತೆಯನ್ನು ಮತ್ತಷ್ಟು ಬಲಪಡಿಸಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ
ದಸರಾ ಮಹೋತ್ಸವದ ಅಂಗವಾಗಿ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ವೀರಸಿಂಹಾಸನದೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗತ್ಪಾದರ
ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ.,
ವೀಣಾ ಕಾಶಪ್ಪನವರ, ರಾಜಕೀಯ ಗಣ್ಯರು, ಜಿಲ್ಲೆಯ ಹಿರಿಯ ಮುಖಂಡರು, ಮಹಿಳೆಯರು, ಯುವಕರು ಸೇರಿದಂತೆ ಅಪಾರ ಸಂಖ್ಯೆಯ ಭಕ್ತರು
ಭಾಗವಾಹಿಸಿದ್ದರು.

Comments

Leave a Comment

Prev Post ಕಬ್ಬು ಬೆಳೆಗಾರರ ಸಮಸ್ಯೆ; ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದು, ಪ್ರಯೋಜನವಾಗುವ ವಿಶ್ವಾಸ ಇದೆ: ಸಿಎಂ ಡಿ ಕೆ ಶಿವಕುಮಾರ್

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News